ಅಪಘಾತಗಳಿಗೆ ನೇರವಾಗಿ ಕಾರಣವಾಗುವ ಚಾಲಕ, ನಿರ್ವಾಹಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಉಡುಪಿ: ಅಪಘಾತ ಘಟನೆಗಳಿಗೆ ನೇರವಾಗಿ ಕಾರಣವಾಗುವ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಉಡುಪಿ ಜಿಲ್ಲಾ ಪೊಲೀಸ್ ಅಧಿಕ ಅಕ್ಷಯ್ ಹಾಕೆ ಮಚ್ಚಿಂದ್ರ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ಬಸ್ ಗಳಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಬಸ್ಸಿನ ಚಾಲಕರ ನಿರ್ಲಕ್ಷತನದಿಂದ ಪ್ರಯಾಣಿಕರು ಇಳಿಯುವ ಮತ್ತು ಏರುವ ಮೊದಲೇ ಬಸ್ಸನ್ನು ಚಲಾಯಿಸುವುದು ಹಾಗೂ ಅತೀಯಾದ ಪ್ರಯಾಣಿಕರನ್ನು ತುಂಬಿಸಿಕೊಂಡು, ಫುಟ್‌ಬೋರ್ಡ್ ಮೇಲೆ ನೇತಾಡಿಕೊಂಡು ಪ್ರಯಾಣಿಸುವಷ್ಟು ಪ್ರಯಾಣಿಕರನ್ನು ಸಾಗಿಸುತ್ತಿರುವುದು, ಅಪಘಾತ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka