ಸುಳ್ಳು ಸುದ್ದಿ: ಅನೈತಿಕ ಪೊಲೀಸ್‌ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಎಸ್ಸೈ ಮಂಜುನಾಥ್ ಎಚ್ಚರಿಕೆ - Mahanayaka

ಸುಳ್ಳು ಸುದ್ದಿ: ಅನೈತಿಕ ಪೊಲೀಸ್‌ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಎಸ್ಸೈ ಮಂಜುನಾಥ್ ಎಚ್ಚರಿಕೆ

police
29/10/2023

ಹಿರಿಯಡ್ಕ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್‌ ಗಿರಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾ ಎಸ್ಸೈ ಮಂಜುನಾಥ ಮರಬದ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ ಬುಕ್, ವಾಟ್ಸಾಪ್, ಇನ್ಸ್ಟ್ರಾಗ್ರಾಮ್, ಟ್ವಿಟರ್ಗಳ ಮೂಲಕ ಅನೈತಿಕ ಪೊಲೀಸ್‌ ಗಿರಿ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿ ಸಾಮಾಜಿಕ ಸ್ವಾಸ್ಥ್ಯ ಹದಗೆಡಿಸಿ ಕೋಮು ಸೌಹಾರ್ದತೆಗೆ ದಕ್ಕೆ ಉಂಟು ಮಾಡಲಾಗುತ್ತಿದೆ.

ಹೀಗೆ ಸಮಾಜದ ಸೌಹಾರ್ದತೆಯನ್ನು ಕದಡಿಸುವವರ ವಿರುದ್ಧ ಇಲಾಖೆ ನಿರ್ದಾಕ್ಷಿಣ್ಯವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಸ್ಸೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ