ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

lakshmi r hebbalkar
12/06/2023

ಉಡುಪಿ:   ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ  ಪ್ರಯತ್ನಿಸುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದುಎಂದುಸಚಿವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version