8:50 PM Saturday 25 - October 2025

ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಸಾವು

prakash
18/09/2023

ದಕ್ಷಿಣ ಕನ್ನಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಔಷಧಿಗೆಂದು ಅವರು ಇಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಜೊತೆಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version