ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಮಠ ಚಿತ್ರ ಖ್ಯಾತಿಯ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಸಾವಿಗೆ ಶರಣು - Mahanayaka
11:34 PM Tuesday 3 - December 2024

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಮಠ ಚಿತ್ರ ಖ್ಯಾತಿಯ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಸಾವಿಗೆ ಶರಣು

guruprasad
03/11/2024

ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರು ಸಾವಿಗೆ ಶರಣಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಬಂದಿದ್ದು, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

ಮೂರು ದಿನಗಳ ಹಿಂದೆ ಗುರುಪ್ರಸಾದ್ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ ನಲ್ಲಿ ಅವರು ಸಾವಿಗೆ ಶರಣಾಗಿದ್ದಾರೆ.

ಗುರುಪ್ರಸಾದ್ ಅವರು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದರು. ತಮ್ಮ 52ನೇ ವಯಸ್ಸಿನಲ್ಲಿ ಜೀವನವನ್ನು ಕೊನೆಗಾಣಿಸಿದ್ದಾರೆ.  3 ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅವರ ಅಪಾರ್ಟ್ ಮೆಂಟ್ ನಲ್ಲಿ ಮೃತದೇಹ ಪತ್ತೆಯಾಗಿದೆ.

2006 ರಲ್ಲಿ ಮಠ  ಸಿನಿಮಾ ಮೂಲಕ ನಿರ್ದೇಶಕ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಗುರುಪ್ರಸಾದ್, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ , ಎರಡನೇ ಸಲ ಸಿನಿಮಾಗಳನ್ನ ನಿರ್ದೇಶಿಸಿದ್ದರು. ರಂಗನಾಯಕ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದ ಅವರು ಕಿರುತೆರೆಯಲ್ಲೂ ಸಾಕಷ್ಟು ರಿಯಾಲಿಟಿ ಶೋ ಗಳಲ್ಲಿ ಭಾಗಿ ಆಗಿದ್ದರು. ಬಿಗ್ ಬಾಸ್ ಶೋದಲ್ಲಿ ಕೂಡ ಅವರು ಭಾಗಿಯಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ