10:20 PM Saturday 23 - August 2025

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ನಟ, ಬಿಗ್ ಬಾಸ್ ವಿಜೇತ ಮಂಜು ಪಾವಗಡ

manju pavagada
05/10/2024

ಬಿಗ್ ಬಾಸ್ ಸೀಸನ್ 8 ವಿಜೇತ ಮಂಜು ಪಾವಗಡ ಅವರು ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಅವರ ಎಂಗೇಜ್ ಮೆಂಟ್ ನಡೆದಿದೆ. ಮಂಜು ಪಾವಗಡ ಅವರು ನಂದಿನಿ ಎಂಬುವವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಂದಿನಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರು–ಹಿರಿಯರು ಒಪ್ಪಿಗೆ ಮೇರೆಗೆ ಈ ಮದುವೆ ಮಾತುಕತೆ ನಡೆದಿದೆಯಂತೆ. ಸದ್ಯ ಮಂಜು ಪಾವಗಡ ಮತ್ತು ನಂದಿನಿ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧ ಫೋಟೋವೊಂದು ವೈರಲ್ ಆಗಿದೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳು, ಆಪ್ತರು ಶುಭ ಹಾರೈಸುತ್ತಿದ್ದಾರೆ.

ಮಂಜು ಪಾವಗಡ ಮತ್ತು ನಂದಿನಿ ಅವರ ಮದುವೆ ನವೆಂಬರ್ 13 ಮತ್ತು 14ರಂದು ಪಾವಗಡದಲ್ಲೇ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಹೊಸ ಮನೆಯೊಂದರ ಗೃಹಪ್ರವೇಶವನ್ನು ಮಂಜು ಮಾಡಿದ್ದರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version