ಮುಡಾ ಭ್ರಷ್ಟಾಚಾರ: ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿದ ನಟ ಚೇತನ್

chethan ahemsa
05/07/2024

ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಭ್ರಷ್ಟಾಚಾರದ ಗಂಭೀರ ಆರೋಪಗಳ ಬಗ್ಗೆ ತಕ್ಷಣದ, ಪಾರದರ್ಶಕತೆಯ ತನಿಖೆ ಅಗತ್ಯವಿದೆ ಎಂದು ನಟ ಅಹಿಂಸಾ ಚೇತನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಚೇತನ್ ಅಹಿಂಸಾ ‘, ತನಿಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇರದಂತೆ ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ವಿಫಲರಾಗಿದ್ದಾರೆ ಮತ್ತು ಅವರು ಲೋಕಾಯುಕ್ತ ಅವರನ್ನು ದುರ್ಬಲಗೊಳಿಸಿದ್ದಾರೆ. ಈಗ, ಅವರನ್ನು ಯಾವುದೇ ಸರ್ಕಾರಿ ಉದ್ಯೋಗಿಯಂತೆ ವಿಶೇಷ ಅನುಕೂಲಗಳಿಲ್ಲದೆ ತನಿಖೆ ಮಾಡಬೇಕು ” ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

 

ಇತ್ತೀಚಿನ ಸುದ್ದಿ

Exit mobile version