10:22 PM Thursday 23 - October 2025

ಪೊಲೀಸರ ಬಳಿ ಸಿಗರೇಟ್ ಗಾಗಿ ಮನವಿ ಮಾಡಿದ ನಟ ದರ್ಶನ್!

darshan
12/06/2024

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಇದೀಗ ಸಿಗರೇಟ್ ಸಿಗದೇ ಕಂಗಾಲಾಗಿದ್ದು, ಸಿಗರೇಟ್ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದರ್ಶನ್ ಹಾಗೂ ಇತರ ಆರೋಪಿಗಳು ಸದ್ಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ವಿಚಾರಣೆ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ದರ್ಶನ್ ಹೇಳಿಕೊಂಡಿದ್ದಾರೆ.

ನಾನು ತಪ್ಪು ಮಾಡಿಲ್ಲ, ನನಗೆ ಗೊತ್ತಿಲ್ಲ, ನಾನು ಕೊಲೆ ಮಾಡಲು ಹೇಳಿಲ್ಲ, ಮಾಡಿಸಿಯೂ ಇಲ್ಲ ಎನ್ನುವುದು ಸದ್ಯ ದರ್ಶನ್ ಪೊಲೀಸರಿಗೆ ನೀಡುತ್ತಿರುವ ಉತ್ತರ ಎಂದು ಹೇಳಲಾಗಿದೆ.

ವಿಚಾರಣೆ ವೇಳೆ ದಯವಿಟ್ಟು ನನಗೆ ಒಂದೇ ಒಂದು ಸಿಗರೇಟ್ ಕೊಡಿಸಿ, ಕೈಗಳು ನಡುಗುತ್ತಿದೆ ಎಂದು ದರ್ಶನ್ ಬೇಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನೂ ದರ್ಶನ್ ಮನವಿಗೆ ಗರಂ ಆದ ಪೊಲೀಸರು ಸಿಗರೇಟ್ ಕೊಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ತನಿಖೆ ವೇಳೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯಗಳು ಲಭ್ಯವಾಗಿದ್ದರೆ, ದರ್ಶನ್ ತಾನೇನು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಾಕ್ಷ್ಯ ಮುಂದಿಟ್ಟು ಪ್ರಶ್ನಿಸಿದರೆ, ಮೌನಕ್ಕೆ ಶರಣಾಗುತ್ತಿದ್ದಾರೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version