7:38 PM Saturday 18 - October 2025

ನಟ ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು

pavithra gowda darshan
20/05/2025

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ.

57ನೇ ಸಿಸಿಹೆಚ್ ನ್ಯಾಯಾಲಯದ ಎದುರು ಇಂದು ಆರೋಪಿಗಳು ಹಾಜರಾಗಿದ್ದು,  ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ಅವರ ಆಪ್ತ, ನಟ ಧನ್ವೀರ್ ಸಾಥ್ ನೀಡಿದ್ದಾರೆ.

ಕಳೆದ ಬಾರಿ ವಿಚಾರಣೆಗೆ ನಟ ದರ್ಶನ್ ಗೈರಾಗಿದ್ದರು. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಆರೋಪಿಗಳು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ದರ್ಶನ್ ಪರ ವಕೀಲರಿಗೆ ಸೂಚಿಸಿತ್ತು.

ಅದರಂತೆ, ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಖುದ್ದು ಹಾಜರಾಗಿದ್ದಾರೆ. ಮತ್ತೊಂದೆಡೆ, ಆರೋಪಿ ಪವಿತ್ರಾ ಗೌಡ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳಿಗೂ ಹಾಜರಾಗುವಂತೆ ಸೂಚಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version