ನಟ ದರ್ಶನ್ –ಪವಿತ್ರಾ ಗೌಡ ಮುಖಾಮುಖಿ: ಕೋರ್ಟ್ ನಲ್ಲಿ ಏನು ನಡೆಯಿತು?
![darshan](https://www.mahanayaka.in/wp-content/uploads/2025/01/darshan.jpg)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಇದೇ ವೇಳೆ ಘಟನೆ ನಡೆದು ಬಂಧನವಾದ ಬಳಿಕ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಮುಖಾಮುಖಿಯಾಗಿದ್ದಾರೆ.
ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಬೇಗನೇ ನ್ಯಾಯಾಲಯಕ್ಕೆ ಬಂದಿದ್ದರು. ದರ್ಶನ್ ಸ್ವಲ್ಪ ತಡವಾಗಿ ಆಗಮಿಸಿದ್ದರು. ನ್ಯಾಯಾಲಯಕ್ಕೆ ಬಂದ ಪವಿತ್ರಾ ಗೌಡ ಹಾಗೂ ದರ್ಶನ್ ಪರಸ್ಪರ ಮಾತನಾಡಿಕೊಂಡರು. ಪವಿತ್ರಾ ಗೌಡ ದರ್ಶನ್ ಆರೋಗ್ಯ ವಿಚಾರಿಸಿದರು, ಇದೇ ವೇಳೆ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಬೆನ್ನುತಟ್ಟಿ ಸಂತೈಸಿಸಿದರು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.
ಸದ್ಯ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಲಾಗಿದೆ. ಮುಂದಿನ ತಿಂಗಳು 25ರಂದು ಎಲ್ಲ ಆರೋಪಿಗಳೂ ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: