ನಟ ದರ್ಶನ್ -ಪವಿತ್ರಾ ಗೌಡ ಇತರ ಆರೋಪಿಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ - Mahanayaka

ನಟ ದರ್ಶನ್ –ಪವಿತ್ರಾ ಗೌಡ ಇತರ ಆರೋಪಿಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ

darshan
04/07/2024


Provided by

ಬೆಂಗಳೂರು:  ಅಶ್ಲೀಲ ಸಂದೇಶ ಕಳುಹಿಸಿ ಪವಿತ್ರಾ ಗೌಡಗೆ ಕಿರುಕುಳ ನೀಡಿದ್ದ ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು  ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ.

ಜುಲೈ 4 ಕ್ಕೆ  ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಗುರುವಾರ ಕೇಸ್‌ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ.

ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆ ಜುಲೈ 18ರವರೆಗೆ ದರ್ಶನ್ ಸಹಿತ ಎಲ್ಲ ಆರೋಪಿಗಳು ಜೈಲಿನಲ್ಲೇ ಇರಬೇಕಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳ ಪೈಕಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಆರೋಪಿಗಳು ಬೆಂಗಳೂರಿನ ಸೆಂಟ್ರಲ್‌ ಜೈಲಿನಲ್ಲಿ ಇದ್ದಾರೆ. ಉಳಿದ 4 ಆರೋಪಿಗಳು ತುಮಕೂರಿನ ಜೈಲಿನಲ್ಲಿ ಇದ್ದಾರೆ. ಗುರುವಾರ ಅವರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಆರೋಪಿಗಳ ಹೆಸರು ಕರೆದಂತೆ ಒಬ್ಬೊಬ್ಬರಾಗಿ ಕೈ ಎತ್ತಿ ನ್ಯಾಯಾಧೀಶರಿಗೆ ನಮಸ್ಕರಿಸಿದರು. ಬಳಿಕ ತನಿಖೆ ನಡೆಯುತ್ತಿರುವುದರಿದ ಮತ್ತಷ್ಟು ದಿನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮನವಿ ಮಾಡಿದ್ದರು. ಈ ಹಿನ್ನೆಲೆ ವಿಸ್ತರಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ