ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸರು ಈಗಾಗಲೇ ನೋಟಿಸ್ ನೀಡಿದ್ದರು.
ನೀವು ಕೊಲೆ ಪ್ರಕರಣದ ಆರೋಪಿಯಾಗಿರುವುದರಿಂದ, ಜಾಮೀನಿನಲ್ಲಿ ಹೊರಗಿರುವ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿಗೆ ಗನ್ ಇರುವುದರಿಂದ ಸಾಕ್ಷಿಗಳನ್ನು ಬೆದರಿಸುವ ಅನುಮಾನ ಇದೆ. ಹೀಗಾಗಿ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ . ವಾರದೊಳಗೆ ನೋಟಿಸ್ ಗೆ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿತ್ತು.
ಪೊಲೀಸರ ನೋಟಿಸ್ ಗೆ ಉತ್ತರಿಸಿದ ನಟ ದರ್ಶನ್, ನಾನು ಸೆಲೆಬ್ರೆಟಿ ಆಗಿರುವುದರಿಂದ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ. ನನ್ನ ಮೇಲಿರುವ ಕೇಸ್ ನ ಸಮಯದಲ್ಲಿ ಗನ್ ಬಳಕೆ ಮಾಡಿಲ್ಲ, ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಲ್ಲ, ಹಾಗಾಗಿ ಗನ್ ಲೈಸೆನ್ಸ್ ಮುಂದುವರಿಸುವಂತೆ ಮನವಿ ಮಾಡಿದ್ದರು. ಆದರೆ ಗನ್ ಪರವಾನಗಿಯನ್ನು ಪೊಲೀಸರು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: