2:40 PM Wednesday 21 - January 2026

ಹಿರಿಯ ನಟ ದೊಡ್ಡಣ್ಣ ಹೃದಯ ಬಡಿತದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

doddanna
26/08/2021

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ದೊಡ್ಡಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ ದೊಡ್ಡಣ್ಣ ಅವರ ಹೃದಯ ಬಡಿತದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿದೆ. 70ರಿಂದ 80ರ ಬದಲಾಗಿ, 20ರಿಂದ 30ಕ್ಕೆ ಇಳಿಕೆಯಾಗಿದ್ದು, ಹೀಗಾಗಿ ಹೃದಯಕ್ಕೆ ಫೇಸ್ ಮೇಕರ್ ಅಳವಡಿಸಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಮೂರು ದಿನಗಳ ಕಾಲ ದೊಡ್ಡಣ್ಣ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ ಎಂದು ಹೇಳಲಾಗಿದ್ದು, ಭಾನುವಾರ ಅವರು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ

ಕಾರನ್ನು ನೀರಿಗೆ ಹಾರಿಸಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ | ಇಬ್ಬರು ನೀರುಪಾಲು

ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ | ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ

ಬ್ರೇಕಿಂಗ್ ನ್ಯೂಸ್:  ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತ ಆರೋಪಿಗಳ ಬಂಧನ

56ನೇ ವಯಸ್ಸಿನಲ್ಲಿ ಮತ್ತೆ ವಿವಾಹವಾದ ಬಹುಭಾಷಾ ನಟ ಪ್ರಕಾಶ್ ರೈ

ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ಯೂಟ್ಯೂಬ್ ನಲ್ಲಿ ವೈರಲ್

ಇತ್ತೀಚಿನ ಸುದ್ದಿ

Exit mobile version