ನಟ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಆರೋಗ್ಯ ಸ್ಥಿತಿ ಚಿಂತಾಜನಕ

k shivaram
28/02/2024

ಬೆಂಗಳೂರು: ಬಾ ನಲ್ಲೆ ಮಧು ಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ, ಸಕ್ರಿಯ ರಾಜಕಾರಣಿ ಕೆ.ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.

20 ದಿನಗಳ ಹಿಂದೆ ಶಿವರಾಮ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಿವರಾಮ್ ಅವರ ಅಳಿಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕೆ.ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದೆ. ಇಂದು ಅವರಿಗೆ ಹೃದಯಾಘಾತವಾಗಿದ್ದು, ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಲಾಗಿದೆ.  ಸದ್ಯ ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಐಎಎಸ್ ಅಧಿಕಾರಿಯೂ ಆಗಿರುವ ಕೆ.ಶಿವರಾಮ್ ಅವರು ನಿವೃತ್ತರಾದ ಬಳಿಕ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು. ಜೆಡಿಎಸ್(2013), ಕಾಂಗ್ರೆಸ್(2016)  ಪ್ರಸ್ತುತ ಬಿಜೆಪಿ ಪಕ್ಷದಲ್ಲಿ ಅವರು ಸಕ್ರಿಯರಾಗಿದ್ದು, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version