ಹನೂರಿ‌ನ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರಾಜ್ - Mahanayaka
10:03 PM Tuesday 9 - September 2025

ಹನೂರಿ‌ನ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರಾಜ್

prajash raj
25/03/2023

ಚಾಮರಾಜನಗರ: ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಪಿಆರ್ ಎಫ್ ಫೌಂಡೇಶನ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಟ್ಟಿದ್ದಾರೆ.


Provided by

ಚಾಮರಾಜನಗರ ಜಿಲ್ಲೆಯಲ್ಲಿ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಸಮಯದಲ್ಲಿ ಗಣನೀಯ ಆರೋಗ್ಯ ಸೇವೆಯನ್ನು ಹೋಲಿಕ್ರಾಸ್ ಆಸ್ಪತ್ರೆ ಕೊಟ್ಟಿದೆ, ಗುಡ್ಡಗಾಡು ಪ್ರದೇಶಗಳಿಗೆ ಅನುಕೂಲವಾಗಲೆಂದು ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಡಲಾಗುತ್ತಿದೆ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.

ನಮ್ಮ ಆಸ್ಪತ್ರೆಯ ಸೇವೆ ಗುರುತಿಸಿ ಇಂದು ನೀಡಿರುವ ತುರ್ತು ವಾಹನದ ಸದುಪಯೋಗ ಕಾಡಂಚಿನ ಗುಡ್ಡ ಪ್ರದೇಶದ ಜನರಿಗೆ ಸಿಗಲಿದೆ ಜೊತೆಗೆ ಈ ತುರ್ತು ವಾಹನ ನೀಡಿದ ಪ್ರಕಾಶ್ ರೈ ಅವರಿಗೆ ಅಭಿನಂದನೆಗಳು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ ಅಭಿನಂದನೆ ಸಲ್ಲಿಸಿದ್ದಾರೆ.

ಆ್ಯಂಬುಲೆನ್ಸ್ ಹಸ್ತಾಂತರ ಬೆಂಗಳೂರಿನಲ್ಲಿ ನಡೆದಿದ್ದು ಅರಣ್ಯ ಪ್ರದೇಶಕ್ಕೆ ಅನೂಕುಲವಾಗಲೆಂದು 4×4 ಪೋರ್ಸ್ ವಾಹನ ಕೊಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ