ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ: ಸಿಎಂ ಬಸವರಾಜ ಬೊಮ್ಮಾಯಿ - Mahanayaka

ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ: ಸಿಎಂ ಬಸವರಾಜ ಬೊಮ್ಮಾಯಿ

bommai sudeep
05/04/2023


Provided by

ಬೆಂಗಳೂರು: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Provided by

ಅವರು ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ  ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು,  ಅವರ ನಿರ್ಣಯವನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿದರು.


Provided by

ಸುದೀಪ್ ಅವರು ಜನಪ್ರಿಯ ನಟರಾಗಿರುವುದರಿಂದ ಅವರ ಪ್ರಚಾರವನ್ನು ಸೂಕ್ತವಾಗಿ ಆಯೋಜಿಸಲಾಗುವುದು. ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು.  ಸುದೀಪ್ ಅವರಿಗೆ ದೇಶದ ಹಾಗೂ ಕರ್ನಾಟಕದ ಬಗ್ಗೆ ಅವರದ್ದೇ ಆದ ವಿಚಾರಧಾರೆಗಳಿವೆ. ಅವುಗಳನ್ನು ಮುಂದೆ ಪ್ರಚಾರದಲ್ಲಿ ತಿಳಿಸುತ್ತಾರೆ.  ನಮ್ಮ ವೈಯಕ್ತಿಕ ಸಂಬಂಧದಿಂದ   ನಿರ್ಣಯ ತೆಗೆದುಕೊಂಡಿದ್ದಾರೆ. ನಾನು ಸೂಚಿಸುವಲ್ಲಿ ಪ್ರಚಾರ ಮಾಡುತ್ತಾರೆ. ಬಿಜೆಪಿ ಪರವಾಗಿಯೂ ಅವರು ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದ ಅವರು ಅವರ ತಂದೆತಾಯಿಗಳಿಗೂ ಕೃತಜ್ಞತೆಗಳನ್ನು ತಿಳಿಸಿದರು. ಅವರ ಸಮಯ, ಗೌರವವನ್ನು ಗಮನದಲ್ಲಿಟ್ಟುಕೊಂಡು  ಸುದೀಪ್ ಅವರು ಪ್ರಚಾರಕ್ಕೆ ನಿಂತಿರುವುದು ಕರ್ನಾಟಕದಲ್ಲಿ ವಿದ್ಯುತ್ ಸಂಚಲನವಾದಂತಾಗಿದೆ. ವಿಶೇಷವಾಗಿ ಯುವಕರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಅವರ ಬೆಂಬಲವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿ ಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮುನಿರತ್ನ ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ