1:52 PM Wednesday 12 - November 2025

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಆರೋಪಿಯ ಬಂಧನ

upendra
12/11/2025

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಬೆಂಗಳೂರಿನ ಸದಾಶಿವನಗರ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಊರಿನ ಸುಮಾರು 150 ಮಂದಿ ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ವಿಕಾಸ್ ನನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೆಪ್ಟಂಬರ್ 15ರಂದು ಈ ಘಟನೆ ನಡೆದಿತ್ತು. ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್ ಲೈನ್ ನಿಂದ ಕೆಲವು ವಸ್ತುಗಳ ಡೆಲಿವರಿಗಾಗಿ ಮೊಬೈಲ್ ಗೆ ಲಿಂಕ್ ಕಳುಹಿಸಿರುವುದಾಗಿ ಲಿಂಕ್ ಗೆ ಕ್ಲಿಕ್ ಮಾಡಿಸಿ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಲಾಗಿತ್ತು. ಬಳಿಕ ಅವರ ಸಂಪರ್ಕದಲ್ಲಿದ್ದವರಿಗೆ 55 ಸಾವಿರ ಹಣಕ್ಕಾಗಿ ಡಿಮ್ಯಾಂಡ್ ಇಡಲಾಗಿತ್ತು. ಇದೇ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿದ್ದ  ನಟ ಉಪೇಂದ್ರ ಹಾಗೂ ಅವರ ಮ್ಯಾನೇಜರ್ ಮೊಬೈಲ್ ಕೂಡ ಹ್ಯಾಕ್ ಮಾಡಲಾಗಿತ್ತು. ಈ ಸಂಬಂಧ ನಟ ಉಪೇಂದ್ರ  ಪೊಲೀಸರಿಗೆ ದೂರು ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version