ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ ಲೋ ಬಿಪಿ ಮತ್ತು ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಲಭಿಸಬೇಕಿದೆ… ಸದ್ಯದ ಮಾಹಿತಿ ಪ್ರಕಾರ ಬ್ಯಾಂಕಾಕ್ ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಇತ್ತೀಚೆಗೆ ಸಣ್ಣ ವಯಸ್ಸಿನವರಲ್ಲೇ ಹೃದಯಾಘಾತ ಕಾಣಿಸಿಕೊಳ್ಳುತ್ತಿರುವುದು ಆತಂಕದ ವಿಚಾರವಾಗಿದೆ. ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಕೂಡ ಹೃದಯಾಘಾತಕ್ಕೊಳಗಾಗಿದ್ದರು. ಇದೀಗ ವಿಜಯ್ ರಾಘವೇಂದ್ರ ಅವರ ಪತ್ನಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂಬ ಸುದ್ದಿ ವಿಜಯ ರಾಘವೇಂದ್ರ ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw