ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್!

ಚೆನ್ನೈ: ಅನಾರೋಗ್ಯದಿಂದ ಬಳಲುತ್ತಿರುವ ನಟ ವಿಶಾಲ್ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದ್ದು, ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.
ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದ ಮಿಸ್ ಕೂವಾಗಮ್ ಟ್ರಾನ್ಸ್ಜೆಂಡರ್ ಬ್ಯೂಟಿ ಕಂಟೆಸ್ಟ್ ನಲ್ಲಿ ನಟ ವಿಶಾಲ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ವಿಶಾಲ್ ಹಠಾತ್ತನೆ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ವಿಶಾಲ್ ಅವರ ಆರೋಗ್ಯದ ಬಗ್ಗೆ ಹಲವಾರು ವರದಿಗಳಿವೆ. ಪ್ರತಿ ಬಾರಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾದಾಗಲೂ ವಿಶಾಲ್ ಅನಾರೋಗ್ಯದಿಂದ ಕುಸಿಯುತ್ತಿದ್ದಾರೆ. ಅವರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.
ಇನ್ನೂ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ವಿಶಾಲ್ ಅವರ ಮ್ಯಾನೇಜರ್, ಊಟ ಮಾಡದ ಕಾರಣ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿಸಿದ್ದಾರೆ.
ಸಾಕಷ್ಟು ಸಮಯಗಳಿಂದಲೂ ದರ್ಶನ ನೀಡದೇ ಇದ್ದ ವಿಶಾಲ್ ಜನವರಿಯಲ್ಲಿ ತಮ್ಮ ಮದಗಜ ಚಿತ್ರದ ಪ್ರಚಾರದ ವೇಳೆ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ಕೈಗಳು ನಡುಗುತ್ತಿದ್ದವು, ಮಾತು ತೊದಲುತ್ತಿತ್ತು. ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗಿದ್ದರು. ಈವರೆಗೂ ವಿಶಾಲ್ ಅವರ ಆರೋಗ್ಯ ಚೇತರಿಕೆ ಕಂಡಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD