ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ - Mahanayaka

ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

actress amulya brother
17/10/2024


Provided by

ಖ್ಯಾತ ನಟಿ ಅಮೂಲ್ಯ ಅವರ ಅಣ್ಣ ದೀಪಕ್ ಅರಸ್ ಅವರು  ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕರಲ್ಲಿ ಒಬ್ಬರಾಗಿದ್ದ ದೀಪಕ್ ಅರಸ್, 2011 ರಲ್ಲಿ ತೆರೆಕಂಡ ರಾಕೇಶ್ ಅಭಿನಯದ `ಮನಸಾಲಜಿ’ಚಿತ್ರವನ್ನು ನಿರ್ದೇಶಿಸಿದ್ದಾರೆ.  2023 ರಲ್ಲಿ ತೆರೆಕಂಡ ಶುಗರ್ ಫ್ಯಾಕ್ಟರಿ ಸಿನಿಮಾವನ್ನು ದೀಪಕ್ ಅವರು ನಿರ್ದೇಶಿಸಿದ್ದಾರೆ.

42 ವರ್ಷದ ದೀಪಕ್ ಅರಸ್ ಅವರು, ಕಿಡ್ನಿ ವೈಫಲ್ಯದಿಂದ ಬಳಲುತಿದ್ದರು. ಎರಡು ಕಿಡ್ನಿ ವೈಫಲ್ಯವಾದರಿಂದ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ. ಬೆಂಗಳೂರಿನ ಆರ್​.ಆರ್.​ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಅವರು ಸಾವನ್ನಪಿದ್ದಾರೆ. ಬಳಿಕ ವಯ್ಯಾಲಿಕಾವಲ್​ನ ನಿವಾಸಕ್ಕೆ ಮೃತ ದೇಹವನ್ನು ತರಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ