ಅಶ್ಲೀಲ ಸಂದೇಶ: ದರ್ಶನ್  ಫ್ಯಾನ್ಸ್ ವಿರುದ್ಧ ದೂರು ನೀಡಿದ ನಟಿ ರಮ್ಯಾ

divya spandana ramya
29/07/2025

ನಟಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಕಿತ್ತಾಟ ಇದೀಗ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿದೆ. ಸುಮಾರು 48  ಸೋಷಿಯಲ್ ಮೀಡಿಯಾ ಅಕೌಂಟ್ ಗಳಿಂದ ತನಗೆ ಅಶ್ಲೀಲ ಮೆಸೆಜ್ ಬಂದಿರುವುದಾಗಿ ರಮ್ಯಾ ದೂರಿನಲ್ಲಿ ತಿಳಿಸಿದ್ದಾರೆ.

ನಟ ದರ್ಶನ್‌ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಿಂದ ಸಾಮಾನ್ಯರಿಗೆ ನ್ಯಾಯ ಸಿಗುತ್ತೆ ಅಂತ ನಂಬಿದ್ದು ನಿಜವಾಗಿದೆ ಅಂತ ಅವರು ಬರೆದುಕೊಂಡಿದ್ದರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಅಂತಾನೂ ಪೋಸ್ಟ್ ಮಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಿಡಿಗೇಡಿಗಳು ರಮ್ಯಾಗೆ ಅಶ್ಲೀಲ ಮೆಸೆಜ್ ಕಳುಹಿಸಿದ್ದರು. ಈ ಮೆಸೆಜ್ ಗಳ ಸ್ಕ್ರೀನ್ ಶಾಟ್ ತೆಗೆದು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

ದರ್ಶನ್ ವಿರುದ್ಧದ ಕೊಲೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇತ್ತು. ಕೋರ್ಟ್ ಕಲಾಪಗಳನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಜಿ ಸಂಸದೆಯಾಗಿ ವಿವಿಧ ಸುದ್ದಿ ವರದಿಯನ್ನು ಹಂಚಿಕೊಂಡಿದ್ದೆ. ಸುಪ್ರೀಂಕೋರ್ಟ್ ಕಾರ್ಯಕಲಾಪದ ವರದಿಯನ್ನ ಹಂಚಿಕೊಂಡಿದ್ದೆ. ಆ ಕಾರಣಕ್ಕಾಗಿ ವಿವಿಧ ಖಾತೆಗಳಿಂದ ಅಸಹ್ಯಕರ ಸಂದೇಶ, ಭಯಾನಕವಾಗಿ ಅವಹೇಳನಕಾರಿ ಸಂದೇಶಗಳನ್ನ ಕಳುಹಿಸಿದ್ದರು. ನನಗೆ ಕಳುಹಿಸಲಾದ ಸಂದೇಶಗಳು ಸ್ತ್ರೀದ್ವೇಷದಿಂದ ಕೂಡಿದ್ದವು. ಅವುಗಳನ್ನ ದೂರಿನಲ್ಲಿ ಉಲ್ಲೇಖಿಸಲು ಸಹ ಸಾಧ್ಯವಾಗ್ತಿಲ್ಲ. ದೂರಿನೊಂದಿಗೆ ಸಂದೇಶಗಳ ಲಿಂಕ್‌ಗಳನ್ನ ಲಗತ್ತಿಸುತ್ತಿದ್ದೇನೆ. ದರ್ಶನ್ ಅಭಿಮಾನಿಗಳ ಪೋಸ್ಟ್ ಅತಿರೇಕವಾಗಿದೆ. ಅವರು ಬಳಸಿರುವ ಭಾಷೆ ಅಶ್ಲೀಲ ಮತ್ತು ಕೊಳಕು, ನನ್ನ ಜೀವಕ್ಕೆ ನೇರ ಬೆದರಿಕೆಯೊಡ್ಡಿವೆ. ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣಕ್ರಮಕೈಗೊಳ್ಳಬೇಕು ಎಂದು ನಾಲ್ಕು ಪುಟಗಳ ದೂರಿನಲ್ಲಿ ನಟಿ ರಮ್ಯಾ ಉಲ್ಲೇಖ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version