ಬಿಜೆಪಿ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಇಂದು ಬೆಳಗ್ಗೆ ಅರೆಸ್ಟ್ - Mahanayaka
3:22 PM Wednesday 26 - November 2025

ಬಿಜೆಪಿ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಇಂದು ಬೆಳಗ್ಗೆ ಅರೆಸ್ಟ್

27/10/2020

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದ್ದು, ಪ್ರತಿಭಟನೆಯೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಸಂದರ್ಭದಲ್ಲಿ ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿದೆ.


 

 ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ವಿಸಿಕೆ ನಾಯಕ ಥೋಲ್ ತಿರುಮಾವಾಲವನ್ ವಿರುದ್ಧ ಪ್ರತಿಭಟಿಸಲು ಖುಷ್ಬೂ ಚಿದಂಬರಂಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಖುಷ್ಬೂ, ನನ್ನ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ.  ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.


 ಖುಷ್ಬೂ ಮಾತ್ರವಲ್ಲದೇ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಘವನ್ ಅವರನ್ನು ಟಿಂಡಿವನಂ ಟೋಲ್ ಗೇಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಅವರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದರು ಎಂದು ತಿಳಿದು ಬಂದಿದೆ.


ಇತ್ತೀಚಿನ ಸುದ್ದಿ