ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ವಿಶೇಷ ಉಡುಗೆಯಿಂದ ಗಮನ ಸೆಳೆದ ಪ್ರಧಾನಿ ಮೋದಿ - Mahanayaka

ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ವಿಶೇಷ ಉಡುಗೆಯಿಂದ ಗಮನ ಸೆಳೆದ ಪ್ರಧಾನಿ ಮೋದಿ

pm modi
15/08/2022

ದೇಶಾದ್ಯಂತ ಇಂದು ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದ್ದು, ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆದಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಉಡುಗೆ ಗಮನ ಸೆಳೆದಿದೆ.

ರಾಷ್ಟ್ರೀಯ ಧ್ವಜದ ಚಿತ್ರವಿರುವ ಟರ್ಬಾನ್ ತೊಟ್ಟು, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ಜಾಕೆಟ್ ತೊಟ್ಟು ಪ್ರಧಾನಿ ಮೋದಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ವರ್ಣರಂಜಿತ ಪೇಟವನ್ನು ಧರಿಸುವ ಸಂಪ್ರದಾಯವನ್ನು ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜದ ಚಿತ್ರವಿರುವ ಬಿಳಿ ಪೇಟ ಧರಿಸಿದ್ದರು. ಕೆಂಪು ಕೋಟೆಗೆ ಆಗಮಿಸಿದ ಪ್ರಧಾನಿ ತಮ್ಮ ವಿಶೇಷ ಉಡುಗೆಯಿಂದ ಗಮನ ಸೆಳೆದರು.

ಐತಿಹಾಸಿಕ ಕೆಂಪು ಕೋಟೆಯ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದರು. ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ 9ನೇ ಬಾರಿಗೆ ಸ್ವಾತಂತ್ರ್ಯ ದಿನದ ಭಾಷಣ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ