ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ ಸೇರಿದಂತೆ ಹಲವು ಬದಲಾವಣೆ ಈಗ ನೀವೇ ಮಾಡಬಹುದು - Mahanayaka

ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ ಸೇರಿದಂತೆ ಹಲವು ಬದಲಾವಣೆ ಈಗ ನೀವೇ ಮಾಡಬಹುದು

26/12/2020

ಭಾರತದ ಎಲ್ಲ ಕ್ಷೇತ್ರಗಳಲ್ಲಿಯೂ ಮೊದಲು ಕೇಳುವುದು ಆಧಾರ್ ಕಾರ್ಡ್. ಯಾವ ಕೆಲಸ ಆಗಬೇಕು ಎಂದು ಸರ್ಕಾರಿ ಅಥವಾ ಖಾಸಗಿ ಕಚೇರಿಗಳಿಗೆ ಹೋದಾಗ ಅಲ್ಲಿ ಮೊದಲಿಗೆ ಆಧಾರ್ ಕಾರ್ಡ್ ಕೇಳುತ್ತಾರೆ. ಕೆಲವೊಮ್ಮೆ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗ ಮೊದಲಾದವುಗಳಲ್ಲಿ ಕಂಡು ಬರುವ ವ್ಯತ್ಯಾಸಗಳಿಂದ ನಿಮ್ಮ ಕೆಲಸಗಳಿಗೆ ಅಡೆತಡೆ ಬಂದಿರಬಹುದು.

ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ನವೀಕರಣಕ್ಕಾಗಿ ನೀವು ಸಾಕಷ್ಟು ಬಾರಿ ಅಲೆದಾಟವೂ ನಡೆಸಿರಬಹುದು. ಆದರೆ ಇದೀಗ ನೀವೇ ಆನ್ ಲೈನ್ ಮೂಲಕ ನಿಮ್ಮ ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ಬದಲಿಸಬಹುದಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆಧಾರ್, ಈಗ ನೀವು ಮನೆಯಲ್ಲಿಯೇ ಕುಳಿತುಕೊಂಡು  ಯುಐಡಿಎಐ ವೆಬ್ ಸೈಟ್ ನಲ್ಲಿ ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ನವೀಕರಣ ಮಾಡಬಹುದು ಎಂದು ಟ್ವೀಟ್ ಮಾಡಿದ್ದು, https://ssup.uidai.gov.in/ssup/ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆಧಾರ್ ನ್ನು ನವೀಕರಿಸಿ ಎಂದು ಹೇಳಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ