9ನೇ ತರಗತಿಯಿಂದ ಪದವಿ ಓದುತ್ತಿರುವವರಿಗೆ 60 ಸಾವಿರ ರೂ. ವಿದ್ಯಾರ್ಥಿವೇತನ

Aditya Birla Capital Scholarship 2024 — 9ನೇ ತರಗತಿಯಿಂದ ಪದವೇ ಶಿಕ್ಷಣ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ, ಅರ್ಹ ವಿದ್ಯಾರ್ಥಿಗಳಿಗೆ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸಂಸ್ಥೆಯ ವತಿಯಿಂದ 60,000 ರೂ. ಯವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರಿರುತ್ತಾರೆ? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ರೂಪಾಯಿಯವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ? ಅರ್ಜಿ ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲಿಕ್ಕೆ ಯಾವ ದಾಖಲಾತಿಗಳು ಕಡ್ಡಾಯ? ಅರ್ಜಿ ಯಾವಾಗ ಸಲ್ಲಿಸಬೇಕು ಎಂಬ ಮಾಹಿತಿ ಸೇರಿದಂತೆ ಈ ವಿದ್ಯಾರ್ಥಿ ವೇತನದ ಅವಶ್ಯಕ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ..
ವಿದ್ಯಾರ್ಥಿ ವೇತನದ ವಿವರ : ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಅವರ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ 12,000 ರೂ. ಯಿಂದ 60,000 ರೂ. ವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಸಂಪೂರ್ಣ ಅರ್ಹತೆ ಮತ್ತು ಇತರೆ ಮಾಹಿತಿಯನ್ನು ತಿಳಿದುಕೊಂಡು ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗಲಿದೆ?
* 9ನೇ ತರಗತಿಯಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ – 12,000 ರೂ.
* ಸಾಮಾನ್ಯ ಪದವಿ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳಿಗೆ- 18,000 ರೂ.
* 3 ವರ್ಷದ ವೃತ್ತಿಪರ ಪದವಿ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳಿಗೆ – 48,000 ರೂ.
* 4 ವರ್ಷದ ವೃತ್ತಿಪರ ಪದವಿ ಶಿಕ್ಷಣ ಓದುತ್ತಿರುವ ವಿದ್ಯಾರ್ಥಿಗಳಿಗೆ – 60,000 ರೂ.
ಅರ್ಹತೆಗಳೇನು?
Aditya Birla Capital Scholarship 2024 – ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಲ್ಲಿ ಸಂಬಂಧಪಟ್ಟ ಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
ಅರ್ಜಿ ಸಲ್ಲಿಸುವವರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60 ಪರ್ಸೆಂಟ್ ಅಂಕಗಳೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂಪಾಯಿ ಒಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು?
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ವಿದ್ಯಾರ್ಥಿಯ ಕುಟುಂಬ ವಾರ್ಷಿಕ ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಖಾತೆ ಪುಸ್ತಕ
* ಶೈಕ್ಷಣಿಕ ದಾಖಲಾತಿಗಳು
* ಹಿಂದಿನ ತರಗತಿಯ ಅಂಕಪಟ್ಟಿ
ಅರ್ಜಿ ಸಲ್ಲಿಸಲು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಇದೇ ತಿಂಗಳು ಅಂದರೆ ಸಪ್ಟೆಂಬರ್ 30ನೇ, 2024 ರ ಒಳಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಲಿಂಕ್ : https://www.buddy4study.com/page/aditya-birla-capital-scholarship
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: