15 ವರ್ಷದ ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ - Mahanayaka
2:02 PM Tuesday 27 - September 2022

15 ವರ್ಷದ ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

02/12/2020

ರಾಂಚಿ: 15 ವರ್ಷದ ಆದಿವಾಸಿ ಬಾಲಕಿಯನ್ನುಐವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ನಡೆದಿದ್ದು, ಜಾತ್ರೆಗೆ ತೆರಳುತ್ತಿದ್ದ ವೇಳೆ ನಡು ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯು ತನ್ನ ಹಳ್ಳಿಯಿಂದ ಸೋಮವಾರ ರಾತ್ರಿ 9:30ರ ವೇಳೆಗೆ ಜಾತ್ರೆಗೆ ತೆರಳಿದ್ದು, ಈ ವೇಳೆ ತನ್ನ ಸ್ನೇಹಿತೆ ಹಾಗೂ ಇತರ ನಾಲ್ಕು ಗಂಡು ಮಕ್ಕಳು ಜೊತೆಗಿದ್ದರು. ಈ ವೇಳೆ ಏಕಾಏಕಿ ಐವರ ತಂಡ ಇವರ ಮೇಲೆ ದಾಳಿ ನಡೆಸಿದ್ದು, ಹುಡುಗರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಜೊತೆಗಿದ್ದವರು ಚೆಲ್ಲಾಪಿಲ್ಲಿಯಾಗಿ ಓಡಿ ತಪ್ಪಿಸಿಕೊಂಡಿದ್ದಾರೆ. ಈ 15 ವರ್ಷದ ಬಾಲಕಿ ದುಷ್ಕರ್ಮಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.


ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ಇತರರು ಪೊಲೀಸರಿಗೆ ಮಾಹಿತಿ ನೀಡಿದ್ದು,  ಬಾಲಕಿಯನ್ನು ರಕ್ಷಿಸಲು ಮುಂಜಾನೆ 12:30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ, ಆರೋಪಿಗಳ ಬಂಧನ ಅಥವಾ ಪತ್ತೆ ಪೊಲೀಸರಿಂದ ಸಾಧ್ಯವಾಗಿಲ್ಲ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ವಿವಿಧ ಮಕ್ಕಳ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆಯನ್ನು ಪ್ರತಿಪಕ್ಷಗಳು ತೀವ್ರ ವಿರೋಧಿಸಿದ್ದು, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿವೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ