ಆಡಳಿತ—ವಿಪಕ್ಷ ಒಬ್ಬರಿಗೊಬ್ಬರು ಬೆನ್ನು ಕೆರೆದುಕೊಂಡು ಹಗರಣ ಮುಚ್ಚಿಕೊಳ್ಳುತ್ತಿದ್ದಾರೆ: ನಟ ಚೇತನ್
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಅಹಿಂದ ನಾಯಕ ಎನ್ನುವ ಯೋಗ್ಯತೆ ಇಲ್ಲ ಎಂದು ನಟ ಚೇತನ್ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಸಂವಿಧಾನ ರಕ್ಷಕ ಎಂದು ಹೇಳಿಕೊಂಡು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು, ಆದ್ರೆ ಈಗ ದಲಿತರಿಗೆ ವಂಚನೆ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ದಲಿತರ ಹಣವನ್ನು ತಮ್ಮ ಸ್ಕೀಮ್ ಗಳಿಗೆ ಬಳಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಹಗರಣ ಕೇಳಿ ಬಂದಿದೆ ಎಂದರು.
ಆಡಳಿತ ಮತ್ತು ವಿಪಕ್ಷಗಳು ಒಬ್ಬರಿಗೊಬ್ಬರು ಅವರವರ ಬೆನ್ನು ಕೆರೆದುಕೊಂಡು ಹಗರಣ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಇದೇ ವೇಳೆ ಚೇತನ್ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಎಸ್.ಸಿ. ಎಸ್.ಪಿ ಟಿ.ಎಸ್.ಪಿಯ 26 ಸಾವಿರ ಕೋಟಿ ಹಣ ಬಳಸಿ ದಲಿತರಿಗೆ ಅನ್ಯಾಯ ಮಾಡಿದೆ. ಬಿಜೆಪಿ ಸಂವಿಧಾನ ವಿರೋಧಿ ಅಂತ ಹೇಳಿಕೊಂಡು ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ್ರು. ಆದರೆ ಇವರೂ ಕೂಡ ದಲಿತರ ವಿರೋಧಿಗಳು ಎಂದು ಅವರು ವಾಗ್ದಾಳಿ ನಡೆಸಿದರು.
ಆಗಸ್ಟ್ 28ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಹಠಾವೋ ಅಹಿಂದ ಬಚಾವೋ ಪ್ರತಿಭಟನಾ ಸಮಾವೇಶ ಮಾಡ್ತಿದ್ದೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth