ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ - Mahanayaka
8:57 PM Thursday 11 - September 2025

ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ

appliction
30/05/2023

ಬೆಂಗಳೂರು: 2023–24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Provided by

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS IDಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS IDಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ