ಲಂಚಕ್ಕೆ ಕೈಯೊಡ್ಡಿ, ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಎಇಇ!

manjunath
16/02/2024

ಚಿಕ್ಕಮಗಳೂರು: ಲಂಚಕ್ಕೆ ಕೈಯೊಡ್ಡಿದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್(AEE) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್, ಲೋಕಾಯುಕ್ತ ಬಲೆಗೆ ಬಿದ್ದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು, ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಜಮೀನಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಥಳ ಪರಿಶೀಲನೆ ನಡೆಸಿ ಫೈಲ್ ಪೆಂಡಿಂಗ್ ಇಟ್ಟಿದ್ದ ಮಂಜುನಾಥ್, 25 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದ. ಅಂತಿಮವಾಗಿ 15 ಸಾವಿರ ರೂಪಾಯಿಗೆ ದರ ಇಳಿಸಿದ್ದ.

ಇದೀಗ ಲೋಕಾಯುಕ್ತ ಅಧಿಕಾರಿ ಅನಿಲ್ ರಾಥೋಡ್ ನೇತ್ವತ್ವದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ನನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

Exit mobile version