ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

likhitha
02/04/2026

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂದು ಹಬ್ಬಿಸಲಾದ ಸುಳ್ಳು ಸುದ್ದಿಯಿಂದ ಮನನೊಂದು ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ (BAMS) ವಿದ್ಯಾರ್ಥಿನಿ ಲಿಖಿತಾ (23) ಆತ್ಮಹತ್ಯೆಗೆ ಶರಣಾದ ಯುವತಿ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ ನಲ್ಲಿರುವ ತನ್ನ ಮನೆಯಲ್ಲಿ ಲಿಖಿತಾ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ.

ಆತ್ಮಹತ್ಯೆಗೂ ಮುನ್ನ ಲಿಖಿತಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾಳೆ. ಕಾಲೇಜಿನ ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ತನಗೆ ಸಂಬಂಧವಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರಲಾಗಿದೆ ಎಂದು ಅವಳು ಆರೋಪಿಸಿದ್ದಾಳೆ.

ಡೆತ್ ನೋಟ್‌ ನಲ್ಲಿ ಪ್ರಾಧ್ಯಾಪಕ ಡಾ.ರಾಜು, ಅವರ ಪತ್ನಿ ನಿಶಾ ಹಾಗೂ ಕಾಲೇಜಿನ ಕೆಲವು ಸಹಪಾಠಿ ವಿದ್ಯಾರ್ಥಿನಿಯರ ಹೆಸರುಗಳನ್ನು ಬರೆಯಲಾಗಿದ್ದು, ಇವರು ನೀಡಿದ ಮಾನಸಿಕ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ನೇರ ಕಾರಣ ಎಂದು ಲಿಖಿತಾ ತಿಳಿಸಿದ್ದಾಳೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ನೀಡಿದ ಡೆತ್ ನೋಟ್ ಆಧಾರದ ಮೇಲೆ ಪ್ರಾಧ್ಯಾಪಕ ರಾಜು, ಪತ್ನಿ ನಿಶಾ ಮತ್ತು ಇತರ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version