ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು - Mahanayaka

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಕಂಪನ: 26 ಮಂದಿ ಸಾವು

afghan
18/01/2022

ಹೆರಾತ್​( ಅಫ್ಘಾನಿಸ್ತಾನ): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಭವಿಸಿದ ಭೂಕಂಪದ ನಂತರ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾದ್ಘಿಸ್‌ ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಮನೆಗಳ ಮೇಲ್ಛಾವಣಿ ಕುಸಿದ ಪರಿಣಾಮ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ ರಿಕ್ಟರ್​ ಮಾಪಕದಲ್ಲಿ ಭೂಕಂಪವು 5.3 ತೀವ್ರತೆ ದಾಖಲಿಸಿದೆ ಎಂದು ತಿಳಿದು ಬಂದಿದೆ. ಭೂಕಂಪದಲ್ಲಿ ಸಾವನ್ನಪ್ಪಿದ 26 ಜನರಲ್ಲಿ ಐದು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ. ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಎಂದು ಸರ್ವಾರಿ ಮಾಹಿತಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರತದ ಈಶಾನ್ಯ ಭಾಗದಲ್ಲಿ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9 ತೀವ್ರತೆ ದಾಖಲು

ಸಾಹಿತಿ ಚಂದ್ರಶೇಖರ್ ಕಂಬಾರ ಅವರಿಗೆ ಪತ್ನಿ ವಿಯೋಗ

ಬೆಳ್ತಂಗಡಿ: ಬೈಕ್‌ ಗೆ ಲಾರಿ ಡಿಕ್ಕಿ; ಇಬ್ಬರ ಸಾವು

ಮಾನವಹಕ್ಕುಗಳ ಉಲ್ಲಂಘನೆ: 12 ಸಾವಿರಕ್ಕೂ ಹೆಚ್ಚು ಮಂದಿಯ ಅಕ್ರಮ ಬಂಧನ; ವಿಶ್ವಸಂಸ್ಥೆ ಕಳವಳ

ವರದಕ್ಷಿಣೆ ಕೊಡದಿದ್ದರೆ ಬೆತ್ತಲೆ ಚಿತ್ರ ವೈರಲ್ ಮಾಡುತ್ತೇನೆಂದ ಪತಿ: ಪತ್ನಿಯಿಂದ ದೂರು

 

ಇತ್ತೀಚಿನ ಸುದ್ದಿ