ಎರಡು ವಾರಗಳ ಬಿಡುವಿನ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ

19/08/2023
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಆರಂಭವಾಗಿದ್ದು, ಮಳೆ ಅಬ್ಬರ ಜೋರಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಡಿಮೆಯಾಗಿ ಬಿರು ಬಿಸಿಲಿನ ತಾಪಮಾನ ಏರಿಕೆಯಿಂದ ನದಿಗಳಲ್ಲೂ ನೀರು ಇಳಿಕೆ ಕಂಡಿತ್ತು.
ಆದರೆ ನಿನ್ನೆ ಸಂಜೆಯಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಜನರು ಕೊಂಚ ನಿಟ್ಟುಸಿರುಬಿಟ್ಟಿದ್ದಾರೆ.