ಚೈತ್ರಾ ಕುಂದಾಪುರ ಬಂಧನ ಬೆನ್ನಲ್ಲೇ ಯಾರ ಕೈಗೂ ಸಿಗದೇ ಮಾಯವಾದ ಸ್ವಾಮೀಜಿ

ವಿಜಯನಗರ: ಉದ್ಯಮಿಯೋರ್ವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಪ್ರಜ್ವಲ್ ಹಾಗೂ ಶ್ರೀಕಾಂತ್ ಎಂಬವರನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈ ನಡುವೆ ಈ ಪ್ರಕರಣದ ಎ3 ಆರೋಪಿ ಸ್ವಾಮೀಜಿ ಕಾಣದಂತೆ ಮಾಯವಾಗಿದ್ದಾರೆ.
ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲುಮಠದ ಅಭಿನವ ಹಾಲಶ್ರೀ ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ. ಸದ್ಯ ಸ್ವಾಮೀಜಿ ಮಠಕ್ಕೂ ಬಾರದೇ, ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಇಂದು ಬೆಳಗ್ಗಿನಿಂದಲೇ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.
ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ನಾಮ ಹಾಕಿರುವ ಬಗ್ಗೆ ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು.
ಈ ದೂರು ದಾಖಲಾದ ಬಳಿಕ ನಿನ್ನೆ ಬೆಂಗಳೂರು ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದರು.