ಇಸ್ರೇಲ್ ಹಮಾಸ್ ಯುದ್ಧ: ಜೋರ್ಡಾನ್ ದೊರೆಯೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಚರ್ಚೆಯ ಸಮಯದಲ್ಲಿ ಪಿಎಂ ಮೋದಿ ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಪ್ರಾಣಹಾನಿ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತಮ್ಮ ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡರು. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯನ್ನು ತ್ವರಿತವಾಗಿ ಪರಿಹರಿಸಲು ಒಗ್ಗಟ್ಟಿನ ಪ್ರಯತ್ನಗಳ ಮಹತ್ವವನ್ನು ಒತ್ತಿ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪಶ್ಚಿಮ ಏಷ್ಯಾ ಪ್ರದೇಶದ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟದ ಬಗ್ಗೆ ನಾವು ಕಳವಳಗಳನ್ನು ಹಂಚಿಕೊಳ್ಳುತ್ತೇವೆ. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯನ್ನು ಶೀಘ್ರವಾಗಿ ಪರಿಹರಿಸಲು ಸಂಘಟಿತ ಪ್ರಯತ್ನಗಳು ಬೇಕಾಗುತ್ತವೆ” ಎಂದಿದ್ದಾರೆ.
ಅಕ್ಟೋಬರ್ 7 ರಂದು, ಫೆಲೆಸ್ತೀನ್ ಸಂಘಟನೆಯು ಇಸ್ರೇಲ್ ಮೇಲೆ ದಾಳಿಯನ್ನು ಪ್ರಾರಂಭಿಸಿತು. ಇದರ ಪರಿಣಾಮವಾಗಿ ಒಂದೇ ದಿನ 1400 ಕ್ಕೂ ಹೆಚ್ಚು ಜೀವಗಳು ಜೀವ ಕಳೆದುಕೊಂಡವು. ಇದು 75 ವರ್ಷಗಳ ಹಿಂದೆ ಇಸ್ರೇಲ್ ರಾಜ್ಯ ಸ್ಥಾಪನೆಯಾದ ನಂತರ ಒಂದೇ ದಿನದಲ್ಲಿ ನಡೆದ ಭೀಕರ ಘಟನೆಗಳಲ್ಲಿ ಒಂದಾಗಿದೆ ಎನ್ನಲಾಗಿದೆ.