12:19 AM Thursday 21 - August 2025

ಸಿದ್ದರಾಮಯ್ಯ ಬಳಿಕ ಸಚಿವ ಎಂ.ಬಿ.ಪಾಟೀಲ್  ವಿರುದ್ಧ ರಾಜ್ಯಪಾಲರಿಗೆ ದೂರು!

mb patil
23/08/2024

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬೆನ್ನಲ್ಲೇ ಅವರ ಸಚಿವ ಸಂಪುಟದ ಸಚಿವರೊಬ್ಬರಿಗೆ  ಪ್ರಾಸಿಕ್ಯೂಷನ್‌ ಸಂಕಷ್ಟ ಎದುರಾಗಿದೆ. ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಷನ್‌ ಗೆ  ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌  ಅವರಿಗೆ ದೂರು ನೀಡಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ.

ಎಂ.ಬಿ.ಪಾಟೀಲ್‌ ವಿರುದ್ಧ  ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ.

ಬಿಡದಿ, ವಸಂತ ನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version