10:36 AM Friday 26 - December 2025

ಸಿದ್ದರಾಮಯ್ಯ ಹೆಸರು ಘೋಷಣೆ ಬೆನ್ನಲ್ಲೇ ಡಿಕೆಶಿ ತವರು ಜಿಲ್ಲೆಯಲ್ಲಿ ಹೈಅಲರ್ಟ್

bharath jodo
17/05/2023

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತವರು ಜಿಲ್ಲೆಯಲ್ಲಿ ಫುಲ್ ಹೈಅಲರ್ಟ್ ಮಾಡಲಾಗಿದೆ. ರಾಮನಗರ ಜಿಲ್ಲೆಯ ಪೊಲೀಸರಿಗೆ ಅಲರ್ಟ್ ಆಗಿರಲು ಸೂಚನೆ ನೀಡಿಲಾಗಿದೆ.

ರಾಮನಗರ ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪುವ ಸಾಧ್ಯತೆ ಹಿನ್ನೆಲೆ ಗಲಾಟೆ ಆಗುತ್ತೆ ಎಂದು ಮುಂಜಾಗ್ರತಾ ಕ್ರಮವಾಗಿ ರಾಮನಗರಕ್ಕೆ ಬೆಂಗಳೂರು, ಮೈಸೂರಿನಿಂದ 6 ಕೆಎಸ್ಆರ್ಪಿ ತುಕಡಿ ಆಗಮಿಸಿದೆ.

ಇನ್ನೂ  ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ದೆಹಲಿಯ ಸೋನಿಯಾ ಗಾಂಧಿ ನಿವಾಸದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಡಿಕೆಶಿ​ಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಭಿತ್ತಿ ಪತ್ರ ಪ್ರದರ್ಶನ ಮಾಡಲಾಗುತ್ತಿದೆ. ಡಿಕೆ ಡಿಕೆ ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ.

ಸಿಎಂ ಸ್ಥಾನ ಸಿದ್ದರಾಮಯ್ಯಗೆ ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯಗೆ ಅನುಭವ ಇದೆ. ಕಳೆದ ಬಾರಿಯಂತೆ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರ ಆಯ್ಕೆ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿ.ಕೆ.ಶಿವಕುಮಾರ್ ಡಿಸಿಎಂ ಇರಬಹುದು, ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ. ನಾನೂ ಕೂಡ ಡಿಸಿಎಂ ಕ್ಲೇಮ್ ಮಾಡ್ತೇನೆ. ಬೇರೆ ಸಮುದಾಯಕ್ಕೆ ಡಿಸಿಎಂ ಕೊಟ್ಟರೆ ಕ್ಲೇಮ್ ಮಾಡ್ತೀನಿ.  ವೈಯಕ್ತಿಕವಾಗಿ ಡಿಸಿಎಂ ಬೇಡ, ಸಚಿವನಾಗಿಯೇ ಇರ್ತೀನಿ ಎಂದು ಅವರು ತಮ್ಮ ನಿಲುವು ತಿಳಿಸಿದರು.

ಇನ್ನೂ ಡಿ.ಕೆ.ಶಿವಕುಮಾರ್ ಕೆಲಸ, ಕೊಡುಗೆ ಬಹಳ ಇದೆ. ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ ಅವರ ಮಧ್ಯೆ. ಒಬ್ಬರೇ ಸಿಎಂ–ಡಿಸಿಎಂ ಇದ್ದರೆ ಒಳ್ಳೆಯದು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version