ಜೂನ್ 11 ರಂದು ಸಿಎಂ, ಉಪಮುಖ್ಯಮಂತ್ರಿಗಳ ಸಭೆ ಕರೆದ ಬಿಜೆಪಿ ಹೈಕಮಾಂಡ್ - Mahanayaka

ಜೂನ್ 11 ರಂದು ಸಿಎಂ, ಉಪಮುಖ್ಯಮಂತ್ರಿಗಳ ಸಭೆ ಕರೆದ ಬಿಜೆಪಿ ಹೈಕಮಾಂಡ್

09/06/2023


Provided by

2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸಭಾ ಚುನಾವಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆ ಇದೆ.

ಕೇಂದ್ರ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಬಿ.ಎಲ್.ಸಂತೋಷ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬುಧವಾರ ಜೆಪಿ ನಡ್ಡಾ ಅವರು ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ವಿಶೇಷ ‘ಟಿಫಿನ್ ಮೀಟಿಂಗ್’ ನಡೆಸಿದ್ದರು. ಆ ಸಭೆಯಲ್ಲಿ ಅವರು ಪಕ್ಷದ ಕಾರ್ಯಕರ್ತರಿಗೆ ತಳಮಟ್ಟದಿಂದ ಕೆಲಸ ಮಾಡಲು ಹಾಗೂ ಜನರ ಹೃದಯವನ್ನು ಗೆಲ್ಲಲು ವಿವಿಧ ಮಾರ್ಗಗಳನ್ನು ಕಂಡುಕೊಳ್ಳುವಂತೆ ಸೂಚನೆ ನೀಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ