ಆಗಸ್ಟ್ 8ರವರೆಗೆ ದಕ್ಷಿಣ ಕನ್ನಡದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ನಿರ್ಬಂಧ - Mahanayaka

ಆಗಸ್ಟ್ 8ರವರೆಗೆ ದಕ್ಷಿಣ ಕನ್ನಡದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ನಿರ್ಬಂಧ

night curfuw
05/08/2022


Provided by

ಮಂಗಳೂರು: ಸೆಕ್ಷನ್ 144ರನ್ವಯ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಆಗಸ್ಟ್ 8ರವರೆಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಕೆಲವು ನಿರ್ಬಂಧಗಳು ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.

ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತಿತರ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಮಾಲ್, ಚಿತ್ರಮಂದಿರಗಳು/ಸಿನೆಮಾ ಹಾಲ್, ಪಬ್ ಗಳನ್ನು ಆಗಸ್ಟ್ 8ರವರೆಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಮುಚ್ಚಬೇಕು. ಸಾರ್ವಜನಿಕರು ತುರ್ತು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಯಾವುದೇ ಕಾರಣಗಳಿಗೆ ವಸತಿ ಸಮುಚ್ಚಯದಿಂದ ಹೊರಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ.

ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್, ಅಟೋ ರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾಲಕ್ಕೆ ಅವಕಾಶವಿರುತ್ತದೆ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ ಜಾತ್ರೆಗಳನ್ನು ಹಾಗೂ ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವಂತೆ ತಿಳಿಸಿದ್ದಾರೆ.

ಹೊಟೇಲ್, ಪಾರ್ಸೆಲ್, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ