ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.
ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರೀ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು.
ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD