ಬಿಹಾರದಲ್ಲಿ 5 ಸ್ಥಾನ ಗೆದ್ದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲು ಒವೈಸಿ ಸಿದ್ಧತೆ - Mahanayaka

ಬಿಹಾರದಲ್ಲಿ 5 ಸ್ಥಾನ ಗೆದ್ದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲು ಒವೈಸಿ ಸಿದ್ಧತೆ

11/11/2020

ಹೈದರಾಬಾದ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಯೂ ಎಐಐಎಂಐಎಂ ಸ್ಪರ್ಧಿಸಲಿದೆ ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ ಮುಖ್ಯಸ್ಥ ಅಸದುದ್ದೀನ್ ಒವೈಸಿ ಮಂಗಳವಾರ ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಮುಕ್ತಾಯವಾದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬೈಸಿ, ಅಮೌರ್, ಕೊಚಧಾಮನ್, ಬಹದ್ದೂರ್ಗಂಜ್ ಮತ್ತು ಜೋಕಿಹಾಟ್ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿಯೂ ಎಐಐಎಂಐಎಂ ಸ್ಪರ್ಧಿಸಲಿದೆ ಎಂದು  ಅವರು ತಿಳಿಸಿದ್ದಾರೆ.

ಎಐಐಎಂಐಎಂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಶೇಕಡಾ 1.2 ರಷ್ಟು ಮತಪಡೆದು  5 ಸ್ಥಾನಗಳನ್ನು ಗೆದ್ದಿತ್ತು. ಇನ್ನೂ ಈ ಗೆಲುವಿನ ಬಳಿಕ ಪಶ್ಚಿಮ ಬಂಗಾಳದಲ್ಲಿಯೂ ಸ್ಪರ್ಧಿಸಲು ಒವೈಸಿ ಉತ್ಸಾಹ ತೋರಿಸಿದ್ದಾರೆ. ನಮ್ಮ ಪಕ್ಷದ ಸದಸ್ಯರು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿದ್ದಾರೆ. ಈ ಬಗ್ಗೆ ನಾವು ಖಂಡಿತವಾಗಿಯೂ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಒವೈಸಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ