ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: 6 ಕಾರ್ಮಿಕರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ - Mahanayaka

ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: 6 ಕಾರ್ಮಿಕರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

rayachuru
19/04/2024

ರಾಯಚೂರು: ಚಿನ್ನದ ಗಣಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ನಡೆದ ಏರ್ ಬ್ಲಾಸ್ಟ್ ನಲ್ಲಿ ಒಟ್ಟು 6 ಮಂದಿಗೆ ಗಾಯಗೊಂಡು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಡೆದಿದೆ.

ಸುರಂಗ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು ಐವರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದ ಪರಿಣಾಮ ಆತನ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಬಸವರಾಜ್ ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಆದ ಪರಿಣಾಮ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಈ ವೇಳೆ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಿ ಹಟ್ಟಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ