10:35 AM Thursday 16 - October 2025

ಪಾಕಿಸ್ತಾನದಿಂದ ವೈಮಾನಿಕ ದಾಳಿ: ತಾಲಿಬಾನ್ ಗಳಿಂದ ಪ್ರತೀಕಾರದ ದಾಳಿ

28/12/2024

ಪಾಕಿಸ್ತಾನದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಅಫಘಾನಿಸ್ತಾನದ ತಾಲಿಬಾನ್ ಪಡೆಗಳು ನೆರೆಯ ಪಾಕ್‌ನ ಹಲವು ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ಶನಿವಾರ ತಿಳಿಸಿದೆ.

ಪೂರ್ವ ಅಫ್ಗಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಿಂದಾಗಿ ಮಹಿಳೆಯರು, ಮಕ್ಕಳು ಸೇರಿ 46 ಮಂದಿ ಮೃತಪಟ್ಟಿದ್ದರು.
ಪಾಕಿಸ್ತಾನದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಅಫ್ಗಾನಿಸ್ತಾನದ ತಾಲಿಬಾನ್ ಪಡೆಗಳು ಪಾಕಿಸ್ಥಾನದ ವಿವಿಧ ಪ್ರದೇಶಗಳ ಮೇಲೆ ದಾಲಿ ನಡೆಸಿವೆ ಎಂಬ ಮಾಹಿತಿ ಹೊರಬಿದ್ದಿದೆ. ನಿರ್ಧಿಷ್ಟವಾಗಿ ಯಾವ ಯಾವ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಅಫ್ಗನ್‌ ಸರ್ಕಾರ ಖಚಿತಪಡಿಸಿಲ್ಲ. ಆದರೆ, ಪಾಕ್‌ ಗಡಿಯೊಳಗೆ ನುಗ್ಗಿ ದಾಳಿ ನಡೆಸಲಾಗಿದೆ ಎಂದಷ್ಟೇ ಅಫ್ಗನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪೂರ್ವ ಅಫ್ಗಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಿಂದಾಗಿ ಮಹಿಳೆಯರು, ಮಕ್ಕಳು ಸೇರಿ 46 ಮಂದಿ ಮೃತಪಟ್ಟಿದ್ದರು.
ಅಫ್ಗನ್‌ ಸರ್ಕಾರದ ಉಪ ವಕ್ತಾರ ಹಮ್ದುಲ್ಲಾ ಫಿತ್ರತ್ ಅವರು, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದರು.
ಗಡಿಯಲ್ಲಿನ ತರಬೇತಿ ಸೌಲಭ್ಯವನ್ನು ನಾಶಪಡಿಸಲು ಹಾಗೂ ಒಳನುಸುಳುವಿಕೆ ತಡೆಯಲು ದಾಳಿ ನಡೆಸಲಾಗಿತ್ತು ಎಂದು ಪಾಕ್‌ನ ಅಧಿಕಾರಿಯೊಬ್ಬರು ಹೇಳಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version