ಹೊಸ ಜವಾಬ್ದಾರಿ: ಕಾಂಗ್ರೆಸ್ ಪಕ್ಷದ ನೂತನ ಖಜಾಂಚಿಯಾಗಿ ಅಜಯ್ ಮಾಕೆನ್ ನೇಮಕ: ದಿಢೀರ್ ನೇಮಕಾತಿ ಹಿಂದೆ ಏನಿದೆ ರಹಸ್ಯ..? - Mahanayaka
4:53 AM Saturday 2 - December 2023

ಹೊಸ ಜವಾಬ್ದಾರಿ: ಕಾಂಗ್ರೆಸ್ ಪಕ್ಷದ ನೂತನ ಖಜಾಂಚಿಯಾಗಿ ಅಜಯ್ ಮಾಕೆನ್ ನೇಮಕ: ದಿಢೀರ್ ನೇಮಕಾತಿ ಹಿಂದೆ ಏನಿದೆ ರಹಸ್ಯ..?

01/10/2023

ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಕಾಂಗ್ರೆಸ್ ಖಜಾಂಚಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಪಕ್ಷದ ನಾಯಕ ಪವನ್ ಬನ್ಸಾಲ್ ಈ ಸ್ಥಾನವನ್ನು ಅಲಂಕರಿಸಿದ್ದರು.

ಅಜಯ್ ಮಾಕೆನ್ ಈ ಹಿಂದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರಾಗಿದ್ದಾರೆ. ಈ ಹಿಂದೆ ಅವರು ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದರು.

ಅವರು ಎರಡು ಬಾರಿ ಸಂಸತ್ ಸದಸ್ಯರಾಗಿ ಮತ್ತು ಮೂರು ಬಾರಿ ದೆಹಲಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ, ಅವರು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಅವರು ಎರಡು ಬಾರಿ ಸಂಸತ್ ಸದಸ್ಯರಾಗಿ ಮತ್ತು ಮೂರು ಬಾರಿ ದೆಹಲಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ, ಅವರು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

ಇತ್ತೀಚಿನ ಸುದ್ದಿ