ಯುಪಿ ಅಕ್ರಮ ಗಣಿಗಾರಿಕೆ ಪ್ರಕರಣ: ಸಿಬಿಐ ಸಮನ್ಸ್ ಗೆ ಪ್ರತಿಕ್ರಿಯೆ ನೀಡದಿರಲು ಅಖಿಲೇಶ್ ಯಾದವ್ ನಿರ್ಧಾರ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗುರುವಾರ ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗುವಂತೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದ್ದು ಅದಕ್ಕೆ ಪ್ರತಿಕ್ರಿಯೆ ನೀಡದಿರಲು ಅಖಿಲೇಶ್ ತೀರ್ಮಾನಿಸಿದ್ದಾರೆ.
2012 ಮತ್ತು 2016 ರ ನಡುವೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸುವಂತೆ ಕೇಂದ್ರ ಸಂಸ್ಥೆ ಅಖಿಲೇಶ್ ಯಾದವ್ ಅವರಿಗೆ ಬುಧವಾರ ನೋಟಿಸ್ ಕಳುಹಿಸಿತ್ತು. ಸಿಬಿಐ ಮುಂದೆ ಸಾಕ್ಷಿ ಹೇಳಲು ಯಾದವ್ ದೆಹಲಿಗೆ ಹೋಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಯಾದವ್ ಮುಖ್ಯಮಂತ್ರಿಯಾಗಿದ್ದಾಗ ಇ-ಟೆಂಡರ್ ಪ್ರಕ್ರಿಯೆಯನ್ನು ಉಲ್ಲಂಘಿಸಿ 2012-16ರಲ್ಲಿ ಸರ್ಕಾರಿ ಅಧಿಕಾರಿಗಳು ಗಣಿಗಾರಿಕೆ ಗುತ್ತಿಗೆ ನೀಡುವ ಮೂಲಕ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
ಸಿಬಿಐ ಪ್ರಕಾರ, ಮುಖ್ಯಮಂತ್ರಿ ಕಚೇರಿ ಫೆಬ್ರವರಿ 17, 2013 ರಂದು ಒಂದೇ ದಿನದಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಉಲ್ಲಂಘಿಸಿ 13 ಯೋಜನೆಗಳಿಗೆ ಅನುಮೋದನೆ ನೀಡಿತ್ತು. ಯಾದವ್ ಅವರು 2012-13ರ ಅವಧಿಯಲ್ಲಿ ಗಣಿ ಖಾತೆಯ ಉಸ್ತುವಾರಿ ವಹಿಸಿದ್ದರು ಎಂದು ಆರೋಪಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth