ಗೆಜೆಟೆಡ್ ಪ್ರೊಬೆಷನರ್ಸ್ 2017 ಆಯ್ಕೆ ಪಟ್ಟಿ: ಅಕ್ಕ ಐಎಎಸ್ ಅಕಾಡೆಮಿ ವಿದ್ಯಾರ್ಥಿಗಳಿಂದ ಸಾಧನೆ
ಬೆಂಗಳೂರು: ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ(Akka IAS Academy)ಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದು, 2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಆಯ್ಕೆ ಪಟ್ಟಿಯಲ್ಲಿ ಅಕ್ಕ ಐಎಎಸ್ ಅಕಾಡೆಮಿಯ 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ (KAS) 106 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 2021 ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಇತ್ತೀಚೆಗಷ್ಟೆ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿತ್ತು. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಅಂಕಗಳನ್ನು ಒಟ್ಟಗೂಡಿಸಿ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಿದೆ. 106 ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಲಾಗಿದೆ.
2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ (KAS) ಹುದ್ದೆಗೆ ಅಕ್ಕ ಐಎಎಸ್ ಅಕಾಡೆಮಿಯ 21 ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಅಕ್ಕಾ ಐಎಎಸ್ ಅಕಾಡೆಮಿ ಹೊಸ ದಾಖಲೆ ಬರೆದಿದೆ.
ಸಂಸ್ಥೆಯು ನಾಲ್ಕನೇ ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಈ ಮಹತ್ವದ ಸಾಧನೆ ಮಾಡಿದೆ. ಈ ಸಾಧನೆಗೆ ಅಕ್ಕಾ ಐಎಎಸ್ ಅಕಾಡೆಮಿಯಲ್ಲಿ ಸಿಗುತ್ತಿರುವ ಅತ್ಯುತ್ತಮ ತರಬೇತಿ ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಕಾರಣವಾಗಿದೆ.
ಸಂಸ್ಥೆಯಲ್ಲಿ ಅತ್ಯುತ್ತಮ ದರ್ಜೆಯ ಅನುಭವಿ, ಪರಿಣಿತ ತರಬೇತುದಾರರ ತಂಡವಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಪೂರಕವಾದ ತರಬೇತಿಯನ್ನು ನೀಡುತ್ತಿದೆ. ಸಂಸ್ಥೆಯ ಅವಿರತ ಪರಿಶ್ರಮಕ್ಕೆ ಇದೀಗ ಉತ್ತಮ ಫಲಿತಾಂಶ ದೊರೆತಿದ್ದು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಅಕ್ಕ ಐಎಎಸ್ ಅಕಾಡೆಮಿ ಕುರಿತು ಹೆಚ್ಚಿನ ಮಾಹಿತಿಗಳಿಗಾಗಿ https://www.akkaias.com/ ಲಿಂಕ್ ನ್ನು ಕ್ಲಿಕ್ ಮಾಡಿ, ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























