5:49 AM Tuesday 16 - September 2025

ಅಕ್ರಮವಾಗಿ  ರಕ್ತಚಂದನ ಸಾಗಾಟ: ಮಾಲು ಸಹಿತ ಇಬ್ಬರ ಬಂಧನ

chamarajanagara
23/12/2022

ಪರವಾಗಿ ಇಲ್ಲದೇ ಅಕ್ರಮವಾಗಿ  ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ  ತಾಲೂಕಿನ ಟಗರಪುರ ಸಮೀಪ ಇಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ.

ಕೊಡಗು ಮೂಲದ ಸಮೀರ್ ಹಾಗೂ ಫೈರೋಜ್ ಬಂಧಿತರು. ಯಾವುದೇ ಪರವಾನಗಿ ಇಲ್ಲದೇ  ರಕ್ತ ಚಂದನವನ್ನು  ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳವು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.

ಇನ್ನು, 103 ಕೆಜಿಯಷ್ಟು ರಕ್ತಚಂದನ, ಒಂದು ಕಾರು, ಮೂರು ಮೊಬೈಲ್ ಫೋನುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version