ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಸುಟ್ಟು ಕೊಂದ ಪತಿ!? - Mahanayaka

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತ್ನಿಯನ್ನು ಸುಟ್ಟು ಕೊಂದ ಪತಿ!?

kerala news
29/06/2021

ಪಾಲಕ್ಕಾಡ್: ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಸುಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಕೇರಳ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಮಹಿಳೆಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ  ಆರೋಪಿ ಪತಿಯನ್ನು ಬಂಧಿಸಲಾಗಿದೆ.


Provided by

ಕರಪಾಡ್ ಮೂಲದ ಶ್ರುತಿ ಮೃತ ಮಹಿಳೆಯಾಗಿದ್ದು, ಪತಿ ಶ್ರೀಜಿತ್ ಮೇಲೆ ಹತ್ಯೆ ಆರೋಪ ಕೇಳಿ ಬಂದಿದೆ. ಶ್ರೀಜಿತ್ ಗೆ ಬೇರೊಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇದೆ ಎಂದು ಶ್ರತಿ ಆರೋಪಿಸುತ್ತಿದ್ದಳು. ಇದೇ ಕಾರಣಕ್ಕೆ ಹಲವು ಬಾರಿ ಇವರ ನಡುವೆ ಜಗಳ ನಡೆದಿತ್ತು ಎಂದು ಹೇಳಲಾಗಿದೆ.

ಜೂನ್ 18ರಂದು ಶ್ರೀಜಿತ್ ನ ಕಿಝಿಕಂಚೇರಿಯ ಮನೆಯಲ್ಲಿ ಶ್ರುತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪತಿ ಶ್ರೀಜಿತ್ ತೀವ್ರ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಶ್ರುತಿ ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ಅವರು ಮೃತಪಟ್ಟಿದ್ದಾರೆ.

ಶ್ರೀಜಿತ್ ನಮ್ಮ ಮಗಳಿಗೆ ಹಿಂದಿನಿಂದ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ್ದಾರೆ. ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಆಗಾಗ ಕಿರುಕುಳ ನೀಡುತ್ತಿದ್ದಾರೆ ಎಂದು  ಶ್ರುತಿ ನಮ್ಮ ಬಳಿಯಲ್ಲಿ ಹೇಳಿದ್ದಳು ಎಂದು ಶ್ರುತಿಯ ಪೋಷಕರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಈ ಪ್ರಕರಣವನ್ನು ಎಲ್ಲ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಸದ್ಯ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಶ್ರೀಜಿತ್ ಹಾಗೂ ಶ್ರುತಿ 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಇತ್ತ ತಾಯಿ ಸಾವನ್ನಪ್ಪಿದರೆ,  ತಂದೆ ಜೈಲುಪಾಲಾಗಿದ್ದಾರೆ. ಈ ನಡುವೆ ಮಕ್ಕಳಿಬ್ಬರು ಅನಾಥವಾಗಿದ್ದಾರೆ.

ಇತ್ತೀಚಿನ ಸುದ್ದಿ