ಬೆತ್ತಲೆ ಮಾಡಿ ಮಹಿಳೆಯರ ಗ್ಯಾಂಗ್ ರೇಪ್: ಆಘಾತ ವ್ಯಕ್ತಪಡಿಸಿದ ಅಕ್ಷಯ್ ಕುಮಾರ್, ಮೀರಾಬಾಯಿ ಚಾನು

ಮಣಿಪುರದಲ್ಲಿ ಮಹಿಳೆರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಘಟನೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ವೇಟ್ ಲಿಫ್ಟರ್ ಮೀರಾಬಾಯಿ ಚಾನು, ಮಣಿಪುರದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ತಡೆಗಟ್ಟಿ, ಜನರನ್ನು ಕಾಪಾಡಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದು, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದೇನೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡಬಾರದು. ಈ ರೀತಿಯ ಭಯಾನಕ ಕೃತ್ಯವನ್ನು ಮಾಡಲು ಮುಂದೆ ಯಾರೂ ಯೋಚಿಸಬಾರದು. ಆ ರೀತಿಯ ಕಠಿಣ ಶಿಕ್ಷೆ ಅಪರಾಧಿಗಳಿಗೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ತನ್ನ ರಾಜ್ಯ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ದಯವಿಟ್ಟು ಮಣಿಪುರದ ಜನರನ್ನು ಉಳಿಸಿ ಮತ್ತು ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಿ. ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿ ಮೂರು ತಿಂಗಳಾಗಲಿದೆ. ಅಧಿಕಾರಿಗಳು ಇನ್ನೂ ಶಾಂತಿಯನ್ನು ಮರುಸ್ಥಾಪಿಸಲು ಮುಂದಾಗಿಲ್ಲ. ಹಿಂಸಾಚಾರದಿಂದಾಗಿ ಬಹಳಷ್ಟು ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ ಮತ್ತು ವಿದ್ಯಾರ್ಥಿಗಳು ಅಧ್ಯಯನದತ್ತ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ.
ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವು ಮನೆಗಳು ಸುಟ್ಟು ಕರಕಲಾಗಿವೆ. ಮುಂಬರುವ ವಿಶ್ವ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಮತ್ತು ಹ್ಯಾಂಗ್ ಝೌ ಏಷ್ಯನ್ ಗೇಮ್ಸ್‌ಗಾಗಿ ನಾನು ಯುಎಸ್‌ಎಯಲ್ಲಿ ತರಬೇತಿ ಪಡೆಯುತ್ತಿದ್ದರೂ, ಮಣಿಪುರದಲ್ಲಿ ನನ್ನ ಮನೆ ಇದೆ. ನಾನು ರಾಜ್ಯದಲ್ಲಿ ಇಲ್ಲದಿದ್ದರೂ, ನಾನು ಮನೆಯ ಬಗ್ಗೆ ಯೋಚಿಸುತ್ತೇನೆ. ಸಹಜ ಸ್ಥಿತಿ ಯಾವಾಗ ಮರಳುತ್ತದೆ ಎಂದು ಯೋಚಿಸುತ್ತಿದ್ದೇನೆ. ಆದಷ್ಟು ಬೇಗ ಶಾಂತಿ ಸ್ಥಾಪಿಸಿ ಎಂದು ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw