10:44 AM Tuesday 11 - November 2025

ಬಿಎಸ್ ಪಿ ಬಗ್ಗೆ ಅಪಪ್ರಚಾರ ಆರೋಪ: ಎನ್.ಮಹೇಶ್ ವಿರುದ್ಧ ದೂರು ದಾಖಲು

bsp
12/04/2023

ಕೊಳ್ಳೇಗಾಲ: ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಶಾಸಕ ಎನ್.ಮಹೇಶ್ ಬಿಎಸ್ ಪಿ ಪಕ್ಷದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ನಾಗರಾಜು ಅವರು ಮಂಗಳವಾರ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಶಾಸಕ ಎನ್.ಮಹೇಶ್ ಅವರು ಸೋಮವಾರ ತಾಲ್ಲೂಕಿನ ಹೊಸ ಹಂಪಾಪುರ ಗ್ರಾಮದ ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಕಾರ್ಯಕರ್ತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ಮತ್ತು ಬಿಎಸ್ಪಿ ಪಕ್ಷಗಳು ಈ ಬಾರಿ ಪ್ರಸ್ತುತ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದೆ ಹಾಗೂ ಬಿಎಸ್ಪಿಯ ಮತಗಳು ಮತ್ತು ಬಿಜೆಪಿಯ ಮತಗಳು ಸೇರಿ ನನಗೆ ಹೆಚ್ಚಿನ ಮತಗಳು ಬರಬೇಕು ಎಂದು ಪ್ರಚಾರದಲ್ಲಿ ಬಹಿರಂಗವಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಎಷ್ಟರ ಮಟ್ಟಿಗೆ ಸರಿ. ಬಿ ಎಸ್ ಪಿ ಪಕ್ಷದ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಅಲ್ಲದೆ ಇಂತಹ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಆಕಾರಣ ನೀತಿ ಸಮಿತಿಯ ನಿಯಮಗಳನ್ನು ಉಲ್ಲಂಘಿಸಿದ್ದು, ಈ ಹೇಳಿಕೆಯಿಂದ ಬಿಎಸ್ಪಿ ಪಕ್ಷದ ಕಾರ್ಯಕರ್ತರಿಗೂ, ಮುಖಂಡರಿಗೂ ಹಾಗೂ ಅಭ್ಯರ್ಥಿಗೂ ಆಘಾತ ಉಂಟಾಗಿದ್ದು, ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

ಶಾಸಕ ಏನ್ ಮಹೇಶ್ ಅವರು ರಾಷ್ಟ್ರೀಯ ಪಕ್ಷವಾದ ಬಿಎಸ್‌ ಪಿ ಸಿದ್ಧಾಂತಕ್ಕೆ ಧಕ್ಕೆ ತರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಭಂಗ ಉಂಟುಮಾಡುವಂತೆ ಮಾತನಾಡುತ್ತಿದ್ದಾರೆ. ಈ ಹೇಳಿಕೆಯಿಂದ ಬಿ ಎಸ್ ಪಿ ಅಭ್ಯರ್ಥಿಗೆ ಹಿನ್ನಡೆ ಉಂಟಾಗುತ್ತದೆ. ಆ ಕಾರಣ ಇವರ ಮೇಲೆ ಸೂಕ್ತ ಕ್ರಮ ಕೈಗೊಂಡು ಬಿಎಸ್ಪಿ ಪಕ್ಷದ ಮತದಾರರಿಗೆ ಕಾರ್ಯಕರ್ತರಿಗೆ ಮತದಾರರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಎಸ್ಪಿ ಪಕ್ಷದ ಕೆಲ ಮುಖಂಡರು ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version