ಕರೆಂಟ್ ಕಳ್ಳತನ ಆರೋಪ: ಕುಮಾರಸ್ವಾಮಿ ವಿರುದ್ಧ ದೂರು ದಾಖಲು

h d kumaraswamy
15/11/2023

ಬೆಂಗಳೂರು: ವಿದ್ಯುತ್ ಕಳ್ಳತನ ಆರೋಪದಡಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ  ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.

ಹೆಚ್‌ ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಇನ್ನು  ವಿದ್ಯುತ್ ಕಳ್ಳತನ ರಾಜಕೀಯ ಚರ್ಚೆಗೆ ಗ್ರಾಸವಾಗಿಥತಲ್ಲದೇ. ಮಧ್ಯರಾತ್ರಿ ಜೆಡಿಎಸ್ ಕಚೇರಿ ಮುಂಭಾಗ ಹೆಚ್‌.ಡಿ.ಕುಮಾರಸ್ವಾಮಿ ಭಾವಚಿತ್ರ  ಕರೆಂಟ್ ಕಳ್ಳ ಎಂಬ ಬರಹದಡಿ ಅಂಟಿಸಲಾಗಿತ್ತು.

ಇತ್ತೀಚಿನ ಸುದ್ದಿ

Exit mobile version